ಪಂಚಭೂತಗಳಲ್ಲಿ ಲೀನ

3 months ago

ಖ್ಯಾತ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರಿಗೆ ಮೈಸೂರಿನ ಚಾಮುಂಡಿ ಬೆಟ್ಟದ ಪಾದದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಪುತ್ರರಾದ ರವಿಶಂಕರ್ ಮತ್ತು ಉದಯ್ ಶಂಕರ್ ವಿಧಿವಿಧಾನ ನೆರವೇರಿಸಿದರು. ಭೈರಪ್ಪನವರ ಇಚ್ಛೆಯಂತೆ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಅಗ್ನಿ ಸ್ಪರ್ಶದಲ್ಲಿ ಬಾಗಿಯಾದರು. ಕುಟುಂಬಸ್ಥರು, ಗಣ್ಯರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಅನೇಕರ ಸಮ್ಮುಖದಲ್ಲಿ ಭೈರಪ್ಪ ಪಂಚಭೂತಗಳಲ್ಲಿ ಲೀನರಾದರು. ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ ನೆರವೇರಿಸಿಲಾಯಿತು. ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಸರ್ಕಾರಿ ಗೌರವ ಸಲ್ಲಿಸಲಾಯಿತು.

Loading comments...